ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಮುಂದುವರೆದ ವಿದ್ಯಾರ್ಥಿಗಳ ಪ್ರತಿಭಟನೆ

ಶುಕ್ರವಾರ ಆರಂಭಗೊಂಡ ಬಂಟ್ವಾಳದ ಎಸ್.ವಿ.ಎಸ್.ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ ಸೋಮವಾರವೂ ಮುಂದುವರಿದಿದ್ದು, ಕಾಲೇಜಿನಲ್ಲಿ ಉದ್ಭವಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿವೆ.

ಪ್ರತಿಭಟನೆಗೆ ಎಬಿವಿಪಿಯೂ ಜತೆಗೂಡಿದ್ದು, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದೆ. ಕಾಲೇಜು ಆವರಣದ ಹೊರಭಾಗದಲ್ಲಿ ಪ್ರತಿಭಟನೆ ಮುಂದುವರಿಯಿತು. ಈ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸೋಮವಾರ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ವಿದ್ಯಾರ್ಥಿ ಮುಖಂಡರೊಂದಿಗೆ ಅವರು ಮಾತುಕತೆ ನಡೆಸಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಪೋಷಕರು ನೀಡಿದ ಅಹವಾಲುಗಳನ್ನು ಸ್ವೀಕರಿಸಿ ರಾಜ್ಯ ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎಬಿವಿಪಿ ಮುಖಂಡ ಹರ್ಷಿತ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

23/05/2022 01:19 pm

Cinque Terre

7.36 K

Cinque Terre

0

ಸಂಬಂಧಿತ ಸುದ್ದಿ