ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮುಸ್ಲಿಂ ಧಾರ್ಮಿಕ ಮುಖಂಡರು ಬೆಂಬಲ ನೀಡಿ; ಹಿಜಾಬ್ ವಂಚಿತ ವಿದ್ಯಾರ್ಥಿನಿಯರು

ಮಂಗಳೂರು ವಿವಿ ಕಾಲೇಜಿನಿಂದ ತಮಗೆ ಅನ್ಯಾಯವಾಗಿದೆ. ಕಾಲೇಜಿನ ನಿಯಮದ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ. ಆದರೆ ನಮಗೆ ಕಾಲೇಜಿನಲ್ಲಿ ಶೋಷಣೆಯಾಗುತ್ತಿದೆ ಎಂದು ಆರೋಪಿಸಿ ಹಿಜಾಬ್ ಗೆ ಅವಕಾಶ ಕೊಡಬೇಕು ಎನ್ನುತ್ತಿರುವ ವಿದ್ಯಾರ್ಥಿನಿಯರು ಧಾರ್ಮಿಕ ಮುಖಂಡರು ತಮ್ಮ ಬೆಂಬಲಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಹಿಜಾಬ್ ಗೆ ಅವಕಾಶ ಕೋರಿರುವ ವಿದ್ಯಾರ್ಥಿನಿ ಗೌಸಿಯಾ ಮಾತನಾಡಿ, ಈ ಹಿಂದೆ ಕಾಲೇಜಿನಲ್ಲಿ ಯಾವುದೇ ರೀತಿಯ ಹಿಜಾಬ್ ಸಮಸ್ಯೆಯಿರಲಿಲ್ಲ. ಹೈ ಕೋರ್ಟ್ ಆದೇಶದ ಬಳಿಕವೂ ನಾವು ಹಿಜಾಬ್ ಧರಿಸಿಕೊಂಡೇ ತರಗತಿಗೆ ಹೋಗಿದ್ದೇವೆ. ಆದರೆ ಕೆಲ ದಿನಗಳ ಹಿಂದೆ ಈ ಸಮಸ್ಯೆ ಆರಂಭವಾಗಿದೆ. ಈ ವಿಚಾರವಾಗಿ ಹಲವು ಬಾರಿ ವಿವಿ ಕುಲಪತಿ ಬಳಿಗೆ ಹೋಗಿದ್ದೆವು. ಆಗ ವಿಸಿಯವರು ದ.ಕ.ಜಿಲ್ಲಾಧಿಕಾರಿಯವರಿಂದ ಕೋರ್ಟ್ ಆದೇಶದ ಸ್ಪಷ್ಟನೆ ಲೆಟರ್ ತರುವಂತೆ ಹೇಳಿದ್ದಾರೆ. ಆದ್ದರಿಂದ ನಾವು ಡಿಸಿ ಬಳಿಗೆ ಹೋಗಿದ್ದೆವು. ಆದರೆ ಅವರು ಮೊದಲಿಗೆ ಸಿಗಲಿಲ್ಲ. ಆ ಬಳಿಕ ಎಬಿವಿಪಿ ಒತ್ತಡದಿಂದ ನಮ್ಮನ್ನು ಕಾಲೇಜಿನಿಂದ ಹೊರಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಸದ್ಯ ಈ ಶೈಕ್ಷಣಿಕ ವರ್ಷ ಹಳೆಯ ವಸ್ತ್ರ ಸಂಹಿತೆ ದಯವಿಟ್ಟು ಮುಂದುವರೆಸಿ. ನಾವು ಹಿಂದಿನಿಂದಲೂ ಸಮವಸ್ತ್ರದ ಶಾಲನ್ನು ಹಿಜಾಬ್ ಆಗಿ ಧರಿಸಿ ಬಂದಿದ್ದೇವೆ.

ಕಾಲೇಜಿನ ಈ ಆದೇಶದ ಹಿಂದೆ ಹೈ ಕೋರ್ಟ್ ಆದೇಶ ಇಲ್ಲ. ಬದಲಾಗಿ ಎಬಿವಿಪಿ ಒತ್ತಡದಿಂದ ಈ ಆದೇಶ ಹೊರಡಿಸಲಾಗಿದೆ. ನಾವು ಕಾನೂನು ಹೋರಾಟ ಮಾಡಿದ್ದಲ್ಲಿ ಬಹಳ ಸಮಯ ತೆಗೆದುಕೊಳ್ಳುತ್ತದೆ. ಪ್ರಾಂಶುಪಾಲರು ಶಿರವಸ್ತ್ರ ತೆಗೆಯುವ ಯಾವುದೇ ಉದ್ದೇಶ ಇಲ್ಲ ಅಂದಿದ್ದಾರೆ. ಎಬಿವಿಪಿ ಒತ್ತಡದಿಂದಲೇ ಪ್ರಾಂಶುಪಾಲರು ಈ ಆದೇಶ ಮಾಡಿದ್ದಾರೆ ಎಂದು ಗೌಸಿಯಾ ಆರೋಪಿಸಿದ್ದಾರೆ.

ಇನ್ನು ಮಂಗಳೂರು ವಿವಿ ಸಮನ್ವಯ ಸಮಿತಿ ಅಧ್ಯಕ್ಷ ರಿಯಾಜ್ ಮಾತನಾಡಿ, ಮಂಗಳೂರು ವಿವಿ ಸಮನ್ವಯ ಸಮಿತಿಯು ಎರಡು ದಿನದ ಗಡುವು ದ.ಕ ಜಿಲ್ಲಾಡಳಿತಕ್ಕೆ ಕೊಡುತ್ತದೆ. ಆ ಬಳಿಕವೂ ಪರಿಹಾರ ದೊರಕದಿದ್ದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

Edited By :
PublicNext

PublicNext

03/06/2022 05:48 pm

Cinque Terre

37.85 K

Cinque Terre

12

ಸಂಬಂಧಿತ ಸುದ್ದಿ