ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿರುವುದೇ ಫಲಿತಾಂಶ ಕುಸಿಯಲು ಕಾರಣ!

ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಫಲಿತಾಂಶದ ಮಟ್ಟ ಕುಸಿಯಲು ಬಿಜೆಪಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷ ಬೀಜ ಬಿತ್ತಿರುವುದೇ ಕಾರಣ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರು ನಗರದ ಹೊರವಲಯದಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ನಿಂದ ನಡೆಯುತ್ತಿರುವ ನವಸಂಕಲ್ಪ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಾಠಿ ಹಿಡಿದು ಸೀಟಿ ಓದಿದವರು ತಮ್ಮ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಾರೆ. ಉಳಿದ ಹಿಂದುಳಿದ ವರ್ಗದ ಮಂದಿಯ ಮಕ್ಕಳು ಜೈಲು ಪಾಲಾಗುತ್ತಾರೆ. ದ.ಕ.ಜಿಲ್ಲೆಯು ಹಿಂದುತ್ವದ ಪ್ರಯೋಗಶಾಲೆ ಆಗಿರುವುದೇ ಇದಕ್ಕೆಲ್ಲಾ ಕಾರಣ. ಇದರ ವಿರುದ್ಧ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ದ.ಕ.ಜಿಲ್ಲೆ ಕೋಮುವಾದಿಗಳ ಕೈಗೆ ಸಿಲುಕಿದೆ. ಇಲ್ಲಿನ ಈ ಕೋಮುವಾದವನ್ನು ಯಾವ ರೀತಿ ಮುರಿಯಬೇಕು ಎಂಬ ಚಿಂತನೆಯನ್ನು ಮಾಡಬೇಕಿದೆ ಎಂದು ಹೇಳಿದರು.

Edited By :
PublicNext

PublicNext

14/06/2022 12:55 pm

Cinque Terre

31.72 K

Cinque Terre

4

ಸಂಬಂಧಿತ ಸುದ್ದಿ