ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಾಲೇಜು ಉಳಿವಿಗಾಗಿ ಹಳೆ ವಿದ್ಯಾರ್ಥಿಗಳ ಪ್ರತಿಭಟನೆ

ಇಲ್ಲಿನ ಎಸ್‌ವಿಎಸ್ ಕಾಲೇಜಿನಲ್ಲಿ ಕಾಲೇಜು ಉಳುವಿಗಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಗ್ರಾಮಸ್ಥರು ಸಾಥ್ ನೀಡಿದ್ದಾರೆ. ಸಂಚಾಲಕರು ಹಾಗೂ ಅವರ ಹಿಂಬಾಲಕ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಕಾಲೇಜು ಉಳಿಸಬೇಕು ಎಂದು ಹಳೆ ವಿದ್ಯಾಥಿಗಳು, ಪೋಷಕರು ಹಾಗೂ ಸ್ಥಳೀಯರು ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕೂಡ ಸ್ಥಳಕ್ಕಾಗಿಮಿಸಿ ಹಳೆ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದರು. ಕಾಲೇಜಿನ ಸಂಚಾಲಕರು ಮೂವರು ಸಿಬ್ಬಂದಿಯ ಮೇಲೆ ಎಫ್‌ಐಆರ್ ದಾಖಲಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಇದು ಕಾಲೇಜಿನ ಗೌರವಕ್ಕೆ ಧಕ್ಕೆ ತಂದಿದೆ. ಅಲ್ಲದೆ ವಿದ್ಯಾರ್ಥಿಗಳು ಕೂಡ ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

ಪ್ರಸ್ತುತ ವರ್ಷ ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿಯೂ ತೀರಾ ಕಡಿಮೆಯಾಗಿದ್ದು, ಕಾಲೇಜನ್ನು ಉಳಿಸುವ ನಿಟ್ಟಿನಲ್ಲಿ ಯೋಚನೆ ಮಾಡಬೇಕಾದ ಸ್ಥಿತಿ ಉಂಟಾಗಿದೆ ಎಂದು ಹಳೆ ವಿದ್ಯಾರ್ಥಿಗಳು ತಮ್ಮ ಮನವಿ ಮಾಡಿದರು. ಈ ವೇಳೆ ಅರ್ಲ ದಾಮೋದರ ಪ್ರಭು, ಬಿ.ಶ್ರೀನಿವಾಸ್ ಪೈ, ವಸಂತ್ ಪ್ರಭು ಸೇರಿದಂತೆ ಇತರರು ಭಾಗಿಯಾಗಿದ್ದರು

Edited By :
Kshetra Samachara

Kshetra Samachara

25/05/2022 05:16 pm

Cinque Terre

2.68 K

Cinque Terre

0

ಸಂಬಂಧಿತ ಸುದ್ದಿ