ನ್ಯಾಯ ಪರವಾಗಿ ಕರ್ತವ್ಯ ನಿರ್ವಹಣೆ ಮಾಡುವುದು ನಮ್ಮ ಜವಬ್ದಾರಿಯಾಗಿದೆ.ಆದರೆ ಇಲ್ಲಿ ನನ್ನನ್ನು ಸೇರಿ ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡುವಂತಹ ಕೆಲಸ ನಡೆಯುತ್ತಿದೆ ಎಂದು ಬಜಪೆ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಹೇಳಿಕೆ ನೀಡಿದ್ದಾರೆ.
ಇವರು ಮಂಗಳವಾರದಂದು ಇಲ್ಲಿನ ಸಭಾಭವನದಲ್ಲಿ ನಡೆದ ಪಡುಪೆರಾರ ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಅಥವಾ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಜೊತೆಗೆ ನೇರವಾಗಿ ಮಾತಾಡುವುದಕ್ಕೆ ಅವಕಾಶವಿದೆ ಅವರು ಹೇಳಿದರು.
ಪಂಚಾಯತ್ ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಗ್ರಾಮಸ್ಥರಿಗೆ ನೀಡಿದರು.
Kshetra Samachara
30/03/2022 10:54 am