ಮಂಗಳೂರು: ರಾಜ್ಯದ ಬಿಜೆಪಿ ಸರ್ಕಾರ ತನ್ನ ಮೇಲೆ ಭ್ರಷ್ಟಾಚಾರ ಆರೋಪ ಮಾಡಿರುವ ಪವರ್ ಟಿ.ವಿ. ವಿರುದ್ಧ ಸರ್ಕಾರ ಕೈಗೊಂಡಿರುವ ಕಾನೂನು ಬಾಹಿರ ಪ್ರಕರಣ ಸಂಬಂಧ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿಯಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ಮಾಧ್ಯಮದ ಮೇಲೆ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಇಬ್ರಾಹಿಂ ಕೋಡಿಜಾಲ್, ಪಿ.ಎಂ. ಮುಸ್ತಫಾ, ಎ.ಸಿ. ಜಯರಾಜ್ ಉಪಸ್ಥಿತರಿದ್ದರು.
Kshetra Samachara
29/09/2020 08:55 pm