ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಪುತ್ತೂರು ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಗೆ ಚಾಲನೆ

ಪುತ್ತೂರು ನಾಗರಿಕರ ಬಹು ನಿರೀಕ್ಷಿತ ಎಪಿಎಂಸಿ ರೈಲ್ವೇ ಅಂಡರ್ ಪಾಸ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ಇಂದು ನಡೆಯಿತು.

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅಂಡರ್ ಪಾಸ್ ಕಾಮಗಾರಿಗೆ ಶಿಲಾನ್ಯಾಸ ಕಾರ್ಯ ನೆರವೇರಿಸಿದರು. ಸುಮಾರು 13.60 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ರೈಲ್ವೇ ಇಲಾಖೆ ಈ ಕಾಮಗಾರಿಯನ್ನು ನಿರ್ವಹಿಸಲಿದ್ದು, ರಾಜ್ಯ ಸರಕಾರ ಕಾಮಗಾರಿಯ ಅರ್ಥ ಅನುದಾನವನ್ನು ನೀಡಲಿದೆ.

ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಡಿ.ವಿ.ಸದಾನಂದ ಗೌಡ, ಎಪಿಎಂಸಿ ರೈಲ್ವೇ ಅಂಡರ್ ಪಾಸ್ ನಿರ್ಮಿಸುವ ಕನಸವನ್ನು ಶಾಸಕನಾಗಿರುವ ಸಂದರ್ಭದಲ್ಲೇ ಕಾಣಲಾಗಿತ್ತು. ಇದೀಗ ಈ ಕಾಮಗಾರಿಗೆ ಚಾಲನೆ ನೀಡುವ ದಿನ ಬಂದಿರುವುದು ಸಂತಸ ತಂದಿದೆ ಎಂದ ಅವರು ಈ ಕಾಮಗಾರಿ ನಡೆಸಲು ಸಂಸದ ನಳಿನ್ ಕುಮಾರ್ ಕಟೀಲ್ ಜೊತೆ ಹಲವು ಬಾರಿ ಕೇಂದ್ರ ರೈಲ್ವೇ ಸಚಿವರನ್ನು ಭೇಟಿ ಮಾಡಿದ್ದು,ಕೊನೆಗೂ ಈ ಕಾಮಗಾರಿಗೆ ಸುದಿನ ಮೂಡಿ ಬಂದಿದೆ ಎಂದರು.

ಅಡಿಕೆ ಬೆಳೆಗಾರರು ಒಂದು ಕಾಲದಲ್ಲಿ ಸಾಲಕ್ಕೆ ಸಿಲುಕಿ ಆತ್ಮಹತ್ಯೆ ಹಾದಿ ಹಿಡಿಯುವ ಸಂದರ್ಭದಲ್ಲಿ ಅಡಿಕೆ ಬೆಂಬಲ ಬೆಲೆಗಾಗಿ ಹೋರಾಟ ಮಾಡುವ ಮೂಲಕ ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ಬದುಕು ಸಾಗಿಸುವಂತೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

21/05/2022 06:43 pm

Cinque Terre

8.8 K

Cinque Terre

0

ಸಂಬಂಧಿತ ಸುದ್ದಿ