ಬಂಟ್ವಾಳ: ಸರ್ಕಾರದ ಸೂಚನೆ ಪ್ರಕಾರ, ಮೂಡುನಡುಗೋಡು ಗ್ರಾಮದ ದಡ್ಡಲಕಾಡು ದ.ಕ.ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ (ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ)ಯಲ್ಲಿ ಫೆ.20ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಈಗಾಗಲೇ ಸಿದ್ಧತೆ ನಡೆಸಲಾಗುತ್ತಿದ್ದು, ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಸವಲತ್ತು ವಿತರಣೆ, ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಮಾಲೋಚಿಸಲು ಇಲ್ಲಿ ಅವಕಾಶ ಇರುತ್ತದೆ. ಮೂಡುನಡುಗೋಡು ಗ್ರಾಮದ ಸಾರ್ವಜನಿಕರ ಅಹವಾಲುಗಳಿದ್ದರೆ ಗ್ರಾಪಂ ದೂರುಪೆಟ್ಟಿಗೆಗೆ, ಗ್ರಾಮಲೆಕ್ಕಿಗರಿಗೆ ಅಥವಾ ತಾಲೂಕು ಕಚೇರಿಗೆ ಖುದ್ದಾಗಿ ಸಲ್ಲಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.
Kshetra Samachara
18/02/2021 12:52 pm