ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: " ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಡುವುದು ಜನಪ್ರತಿನಿಧಿಗಳ ಕರ್ತವ್ಯ "

ಮುಲ್ಕಿ: ಸುರತ್ಕಲ್ ಸಮೀಪದ ಮಧ್ಯ ಶ್ರೀ ಖಡ್ಗೇಶ್ವರ- ಶ್ರೀ ಖಡ್ಗೇಶ್ವರಿ ದೇವಸ್ಥಾನದ ಎದುರು ಬದಿಯ ರಸ್ತೆ ಜಿಪಂ ಸದಸ್ಯರ ಅನುದಾನದಿಂದ ಕಾಂಕ್ರೀಟಿಕರಣಗೊಂಡಿದ್ದು, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಸಹಿತ ಎಲ್ಲ ಕಡೆ ಮೂಲ ಸೌಕರ್ಯ ಒದಗಿಸಿ ಕೊಡುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯ ಎಂದರು.

ತಾಪಂ ಸದಸ್ಯೆ ವಜ್ರಾಕ್ಷಿ ಪಿ. ಶೆಟ್ಟಿ, ಚೇಳೈರು ಗ್ರಾಪಂ ಅಧ್ಯಕ್ಷೆ ಯಶೋದಾ ಬಿ., ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಜಯಾನಂದ, ಸದಸ್ಯೆ ಪ್ರತಿಮಾ ಶೆಟ್ಟಿ, ಮುಂಬಯಿ ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯ, ಜಿಪಂ ಇಂಜಿನಿಯರ್ ಪ್ರಶಾಂತ್ ಆಳ್ವ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪುಷ್ಪರಾಜ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

26/02/2021 08:28 pm

Cinque Terre

10.86 K

Cinque Terre

0

ಸಂಬಂಧಿತ ಸುದ್ದಿ