ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬಂಟ್ವಾಳ ತಾಲೂಕು ಘಟಕ ಅಧ್ಯಕ್ಷರಾಗಿ ಜಯಾನಂದ ಪೆರಾಜೆ

ಬಂಟ್ವಾಳ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರಿನ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಕವಿ, ಸಾಹಿತಿ ಜಯಾನಂದ ಪೆರಾಜೆಯವರನ್ನು ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿ ಅವರ ಶಿಫಾರಸ್ಸಿನಂತೆ ರಾಜ್ಯಾಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ನೇಮಿಸಿದ್ದಾರೆ.

ಇವರು ಬಂಟ್ವಾಳ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದು, ಜೇಸಿಐ ಸಂಸ್ಥೆಯ ರಾಜ್ಯ ತರಬೇತುದಾರರಾಗಿದ್ದಾರೆ.

ದೆಹಲಿ ಕರ್ನಾಟಕ ಭವನ, ನೇಪಾಳದ ಪೊಕರಾದಲ್ಲಿ ಮತ್ತು ರಾಜ್ಯ, ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಮೆಚ್ಚುಗೆ ಗಳಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಕಥೆ, ಕವನ, ಲೇಖನ ಪ್ರಕಟವಾಗಿದ್ದು, ಭಾವ ಬಿಂದು ಕವನ ಸಂಕಲನ ಬಿಡುಗಡೆಗೊಳಿಸಿದ್ದಾರೆ.

ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರೂ ಹೌದು. ಪತ್ರಕರ್ತರಾಗಿಯೂ ಗುರುತಿಸಲ್ಪಟ್ಟಿದ್ದು, ಸಾಮಾಜಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಪದಾಧಿಕಾರಿಯಾಗಿದ್ದಾರೆ. ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದು, ಪ್ರಸ್ತುತ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದಾರೆ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ಇವರ ಕ್ರಿಯಾಶೀಲ ವ್ಯಕ್ತಿತ್ವ ಗುರುತಿಸಿ ರೋಟರಿ, ಲಯನ್ಸ್, ಜೇಸಿ ಹಾಗೂ ಹಲವು ಸಂಘ ಸಂಸ್ಥೆಗಳು ಗೌರವಿಸಿದೆ.

Edited By :
Kshetra Samachara

Kshetra Samachara

05/10/2020 05:21 pm

Cinque Terre

4.76 K

Cinque Terre

0

ಸಂಬಂಧಿತ ಸುದ್ದಿ