ಮಂಗಳೂರು: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ.
ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಬಂಧಿತ ಅನೀಸ್ ಪೂಜಾರಿಯ ವಿರುದ್ಧ ಈಗಾಗಲೇ ಕಳ್ಳತನ, ದರೋಡೆ, ಗಾಂಜಾ ಸೇವನೆ ಮತ್ತತರ ಹಲವು ಕೇಸ್‌ಗಳಿವೆ ಎಂದು ತಿಳಿದು ಬಂದಿದೆ.
ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣದತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತನೋರ್ವ ಹಿಂಬಾಲಿಸಿದ್ದ. ಈಸಂಬಂಧ ಪ್ರಕರಣ ದಾಖಲಾಗಿತ್ತು.
Kshetra Samachara
24/12/2020 09:07 pm