ರಾಜ್ಯ ಹೈಕೋರ್ಟ್ ನಿಂದ ಮಹತ್ವದ ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನ್ಯಾಷನಲ್ ವಿಮೆನ್ಸ್ ಫ್ರಂಟ್ ಸುದ್ದಿಗೋಷ್ಟಿ ನಡೆಸಿತು. ಇದೇ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷೆ ಫರ್ಝಾನಾ ಮುಹಮ್ಮದ್, ಹಿಜಾಬ್ ಕುರಿತ ತೀರ್ಪು ಅಸಮಾಧಾನಕರವಾಗಿದೆ. ಈ ತೀರ್ಪು ಸಂವಿಧಾನ ನಮಗೆ ಕೊಟ್ಟ ಹಕ್ಕನ್ನು ಮೊಟಕುಗೊಳಿಸಿದೆ. ವಿದ್ಯಾರ್ಥಿನಿಯರ ಹಿತ ಕಡೆಗಣಿಸಿ ಸರ್ಕಾರ ಸಂಘಪರಿವಾರದ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈ ತೀರ್ಪು ನಮ್ಮ ಸಂವಿಧಾನದ ಹಕ್ಕನ್ನು ಕಸಿದು ಕೊಂಡಿದೆ. ಸಂಘಪರಿವಾರ ಮಹಿಳಾ ಮತ್ತು ಪ್ರತಿಗಾಮಿ ಕೂಟವಾಗಿದೆ. ನಮ್ಮ ಸಾಕ್ಷರತೆ ಪ್ರಮಾಣ ಇಳಿಸಲು ಸಂಘಪರಿವಾರ ಹಿಜಾವ್ ವಿವಾದ ಎಬ್ಬಿಸಿದೆ.
ಈ ತೀರ್ಪು ಮುಸ್ಲಿಂ ಸಮುದಾಯಕ್ಕೆ ತುಂಬಾ ನೋವುಂಟು ಮಾಡಿದೆ. ಆದರೆ ಈ ತೀರ್ಪು ಸಂಘ ಪರಿವಾರಕ್ಕೆ ಮಾತ್ರ ಖುಷಿ ಕೊಟ್ಟಿದೆ. ಈ ತೀರ್ಪಿಗಾಗಿ ಕಾದಿದ್ದ ಹೆಣ್ಮಕ್ಕಳಿಗೆ ಯಾವುದೇ ನ್ಯಾಯ ಸಿಕ್ಕಿಲ್ಲ. ಆ ಹೆಣ್ಮಕ್ಕಳ ಪರವಾಗಿ ನಮ್ಮ ಸಂಘಟನೆ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಧಾರ್ಮಿಕ ಸ್ವಾತಂತ್ರ್ಯದ ಜೊತೆ ಶಿಕ್ಷಣ ಪಡೆಯಿರಿ ಅಂತ ನಾವು ಅವರಿಗೆ ಹೇಳುತ್ತೇವೆ. ಅವರು ಮುಂದೆಯೂ ಕಾನೂನು ಹೋರಾಟ ಮಾಡಲು ನಾವು ಬೆಂಬಲಿಸ್ತೇವೆ.
ಧಾರ್ಮಿಕ ಸ್ವಾತಂತ್ರ್ಯದ ಜೊತೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟರೆ ಅವರು ಬರೆಯಲಿ. ಪರೀಕ್ಷೆ ಬರೆಯಲು ಅವಕಾಶ ಸಿಗದೇ ಅವರು ಹೊರಗೆ ಬಂದ್ರೆ ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಅವರು ಪ್ರತಿಭಟಿಸದೇ ಇದ್ರೆ ಮುಂದೆ ಬೇರೆ ಹಕ್ಕನ್ನ ಕಸಿದುಕೊಳ್ಳಬಹುದು.ಈ ಮೂವರು ನ್ಯಾಯಮೂರ್ತಿಗಳ ತೀರ್ಪು ಸಂವಿಧಾನಿಕ ಹಕ್ಕಿದ ವಿರುದ್ದವಾಗಿದೆ. ಇವತ್ತಿನ ಈ ತೀರ್ಪು ಫ್ಯಾಶಿಷ್ಟರ ಪರ ನೀಡಿದ ತೀರ್ಪಾಗಿದೆ ಎಂದು ಕಿಡಿಕಾರಿದ್ರು.
Kshetra Samachara
15/03/2022 06:19 pm