ಸಚಿವ ಈಶ್ವರಪ್ಪರನ್ನು ಬಂಧಿಸಬೇಕೆಂದು ಒತ್ತಾಯಿಸಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಎಸ್.ಡಿ.ಪಿ.ಐ ಪ್ರತಿಭಟನೆ ನಡೆಸಿತು.
ನಗರ ಹೊರವಲಯದ ವಳಚ್ಚಿಲ್ ಎಂಬಲ್ಲಿ ಸಿಎಂ ಕಾರಿಗೆ ಅಡ್ಡಗಟ್ಟಿದ ಎಸ್.ಡಿ.ಪಿ.ಐ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದರು.
ಮಂಗಳೂರಿನಿಂದ ಬಂಟ್ವಾಳದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಿ.ಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಧಿಕ್ಕಾರ ಕೂಗಿದರು. ತಕ್ಷಣ ಪೊಲೀಸರು ಸ್ಥಳಕ್ಕಾಗಮಿಸಿದ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿ, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.
PublicNext
13/04/2022 11:30 am