ಎಸ್‌ಡಿಪಿಐ ಬಾವುಟ ಹಾಕಿಕೊಂಡು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಯುವಕರಿಬ್ಬರು ಪೊಲೀಸ್ ನಿಂದನೆ ಮಾಡಿರುವ ವೀಡಿಯೊವೊಂದು ವೈರಲ್ ಆಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ನಿನ್ನೆ ನಗರದ ಹೊರವಲಯದಲ್ಲಿರುವ ಕಣ್ಣೂರಿನಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಬೃಹತ್ ಜನಾಧಿಕಾರ ಸಮಾವೇಶ ನಡೆದಿತ್ತು. ಈ ಸಮಾವೇಶಕ್ಕೆ ತೆರಳುತ್ತಿದ್ದ ಸಂದರ್ಭ ಪೊಲೀಸ್ ನಿಂದನೆ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಇದರ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊದಲಿಗೆ ಆರ್‌ಎಸ್ಎಸ್‌ಅನ್ನು ನಿಂದನೆ ಮಾಡಿದ ಈ ಕಿಡಿಗೇಡಿ ಯುವಕರು ಆ ಬಳಿಕ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರ ವೀಡಿಯೋ ವೈರಲ್ ಆಗುತ್ತಿದ್ದು, ಕಾನೂನು ರಕ್ಷಣೆ ಮಾಡುವ ಪೊಲೀಸರನ್ನು ನಿಂದನೆ ಮಾಡಿರುವ ಯುವಕರ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
PublicNext
28/05/2022 05:07 pm