ಸುಬ್ರಹ್ಮಣ್ಯ: ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.
ಇವರೊಂದಿಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಹೆಗ್ಡೆ, ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಶ್ವೇತಾ ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಗಳಾದ ದರ್ಶನ್ ಇದ್ದರು.
ಇವರನ್ನು ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಹಾಗೂ ಸುಳ್ಯ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸ್ವಾಗತಿಸಲಾಯಿತು. ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ ನಾಯಕ್ ಹಾಗೂ ಪದಾಧಿಕಾರಿಗಳು, ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಹಾಗೂ ಯುವ ಮೋರ್ಚಾ ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
07/10/2020 12:21 am