ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಕಾಂಗ್ರೆಸ್ ನಿಂದ ಆಯ್ಕೆಯಾದ ಸದಸ್ಯರ ವಾರ್ಡ್ ನಲ್ಲಿ ಅಭಿವೃದ್ಧಿ ಕಡೆಗಣನೆ, ಚುನಾಯಿತ ಜನಪ್ರತಿನಿಧಿಗಳಿಗೆ ಅಧಿಕಾರವಿಲ್ಲದೆ ಇರುವುದು, ನಿರ್ಮಲ ಬಂಟ್ವಾಳ ಯೋಜನೆಯಡಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಸ್ಥಗಿತಗೊಂಡಿರುವುದು, ಕುಡಿಯುವ ನೀರು ಒದಗಿಸಲು ವಿಫಲವಾಗಿರುವುದು, ನೀರಿನ ಬಿಲ್ ನಲ್ಲಿ ಏರಿಕೆಯಾಗಿರುವುದನ್ನು ಪ್ರಸ್ತಾಪಿಸಿದ ಅವರು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮಹಮ್ಮದ್ ಉಪಸ್ಥಿತರಿದ್ದರು.
Kshetra Samachara
19/09/2020 06:31 pm