ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಸ್.ಡಿ.ಪಿ.ಐ ಜಿಲ್ಲಾ ಮಾಧ್ಯಮ ಸಂಯೋಜಕ ಇಕ್ಬಾಲ್ ಬೆಳ್ಳಾರೆ ರಾಜ್ಯದಲ್ಲಿ ಬಿಜೆಪಿ ಸರಕಾರದ ವೈಫಲ್ಯವನ್ನು ಖಂಡಿಸಿ ಎಸ್.ಡಿ.ಪಿ.ಐ ಪಕ್ಷದಿಂದ ಬೃಹತ್ ಜನಾಧಿಕಾರ ಸಮಾವೇಶ ಮೇ 27 ರಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.
2018 ರ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲದ ಕಾರಣ ಬಿಜೆಪಿಯನ್ನು ಹೊರಗಿಟ್ಟು ಜೆಡಿಎಸ್ ಮತ್ತು ಕಾಂಗ್ರೇಸ್ ಮೈತ್ರಿ ಸರಕಾರ ಆಡಳಿತ ಚುಕ್ಕಾಣಿ ಹಿಡಿದಿತ್ತು. ಆದ್ರೆ ಬಿಜೆಪಿ ಬೇರೆ ಪಕ್ಷಗಳು ಶಾಸಕರನ್ನು ಖರೀದಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಎಲ್ಲಾ ವ್ಯವಸ್ಥೆಗಳಲ್ಲಿ ಭ್ರಷ್ಟಾಚಾರವನ್ನು ಪೋಷಿಸುತ್ತಿದೆ ಎಂದ್ರು.
ಸರಕಾರದ ಈ ಭ್ರಷ್ಟ ನೀತಿಯನ್ನು ಜನತೆಯ ಮುಂದೆ ಇಡುವ ನಿಟ್ಟಿನಲ್ಲಿ ಈ ಜನಾಧಿಕಾರ ಸಮಾವೇಶವನ್ನು ನಡೆಸಲಾಗುತ್ತಿದೆ. ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ದಕ್ಷಿಣಕನ್ನಡ ಜಿಲ್ಲೆಯ ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ರು. ಸಮಾವೇಶದಲ್ಲಿ ಎಸ್.ಡಿ.ಪಿ.ಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು
Kshetra Samachara
24/05/2022 01:09 pm