ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಣೆಮಂಗಳೂರು: ಬಾಳ್ತಿಲ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಾಳ್ತಿಲ ವಲಯ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ ಸೋಮವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಗ್ರಾಪಂ ಚುನಾವಣೆ ಸಂಬಂಧ ಕಾರ್ಯಕರ್ತರಿಗೆ ಹಲವು ಸೂಚನೆ ನೀಡಿದರು. ಜಿಪಂ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ, ಎಂ.ಎಸ್. ಮುಹಮ್ಮದ್, ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಶಿವಪ್ರಸಾದ್ ಕನಪಾಡಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ವಲಯಾಧ್ಯಕ್ಷ ಸೀನಪ್ಪಪೂಜಾರಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ರಜಾಕ್ ನೀರಪಾದೆ, ಕಾರ್ಯದರ್ಶಿ ಚಂದ್ರಶೇಖರ ಬಾಳ್ತಿಲ ಮೊದಲಾದವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

05/10/2020 11:32 pm

Cinque Terre

4.19 K

Cinque Terre

0

ಸಂಬಂಧಿತ ಸುದ್ದಿ