ಪುತ್ತೂರು: ಬಿಜೆಪಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಮಂಗಳೂರು: ಪುತ್ತೂರು ಗ್ರಾಮಾಂತರ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಿಕಟಪೂರ್ವ ಅಧ್ಯಕ್ಷರಾದ ಅಪ್ಪಯ್ಯ ಮಣಿಯಾಣಿ, ಅಚ್ಯುತ ಮೂಡತ್ತಾಯ, ಚನಿಲ ತಿಮ್ಮಪ್ಪ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Kshetra Samachara

Kshetra Samachara

1 month ago

Cinque Terre

2 K

Cinque Terre

0