ಪುತ್ತೂರು: ತಾಲೂಕು ಮತ್ತು ನಗರಸಭಾ ವ್ಯಾಪ್ತಿಯ 94ಸಿ ಮತ್ತು 94 ಸಿಸಿ ನಿಯಮದಡಿ ಅರ್ಜಿ ಸಲ್ಲಿಸಿದ್ದ 201 ಫಲಾನುಭವಿಗಳಿಗೆ ಶಾಸಕ ಸಂಜೀವ ಮಠಂದೂರು ಪುತ್ತೂರು ಪುರಭವನದಲ್ಲಿ ಹಕ್ಕು ಪತ್ರ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಪುತ್ತೂರು ತಾಲೂಕಿನಲ್ಲಿ 94 ಸಿ ಮತ್ತು 94 ಸಿಸಿ ಅಡಿ 2,596 ಮಂದಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 1,306 ಮಂದಿಗೆ ಈಗಾಗಲೇ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ ಅರ್ಜಿದಾರರಿಗೆ ಮುಂದಿನ 2 ತಿಂಗಳೊಳಗಾಗಿ ಹಕ್ಕುಪತ್ರ ವಿತರಿಸಲು ವ್ಯವಸ್ಥೆ ಮಾಡಲಾಗುವುದು ಎಂದರು.
ತಾಪಂ ಸದಸ್ಯರಾದ ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ, ದಿವ್ಯಾ ಪುರುಷೋತ್ತಮ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸದಸ್ಯೆ ಮೀನಾಕ್ಷಿ ಮಂಜುನಾಥ, ದಿವ್ಯಾ ಪುರುಷೋತ್ತಮ ಉಪಸ್ಥಿತರಿದ್ದರು.
Kshetra Samachara
07/10/2020 12:29 am