ಮುಲ್ಕಿ: ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭ ಅರ್ಚಕ ಶ್ರೀಪತಿ ಉಪಾಧ್ಯಾಯ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರದ ಅನುವಂಶಿಕ ಮೊಕ್ತೇಸರ ಮನೋಹರ ಶೆಟ್ಟಿ , ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಶೇಖರ ಶೆಟ್ಟಿ, ಸಂಜೀವ ದೇವಾಡಿಗ ಮತ್ತು ಉದ್ಯಮಿ ಜೀವನ್ ಕೆ. ಶೆಟ್ಟಿ. ಉಪಸ್ಥಿತರಿದ್ದರು.
Kshetra Samachara
11/12/2020 08:41 pm