ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ.ದಲ್ಲಿ ನಾಳೆ ಗ್ರಾಪಂ 2ನೇ ಹಂತದ ಚುನಾವಣೆ

ಮಂಗಳೂರು: ದ.ಕ. ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ಭಾನುವಾರ ಎರಡನೇ ಹಂತದ ಚುನಾವಣೆ ನಡೆಯಲಿದ್ದು, 3,421 ಅಭ್ಯರ್ಥಿಗಳಿ ಕಣದಲ್ಲಿದ್ದಾರೆ.

ಬೆಳ್ತಂಗಡಿ ತಾಲೂಕಿನ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಗ್ರಾಪಂಗಳ ಒಟ್ಟು 1, 541 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆದರೆ, 41 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ನಡೆದಿರುವ ಹಿನ್ನೆಲೆಯಲ್ಲಿ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಡಿ.27ರಂದು ಸಂಜೆ 5 ಗಂಟೆವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ಹಾಗಾಗಿ ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಮತದಾನಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿ ಗಳು ಸಕಾರಣವಿಲ್ಲದೆ 5 ಮಂದಿ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ಆಯುಧ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ವಸ್ತು ಹೊಂದಿರುವುದು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

26/12/2020 09:32 pm

Cinque Terre

8 K

Cinque Terre

0

ಸಂಬಂಧಿತ ಸುದ್ದಿ