ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬನ್ನಡ್ಕ: ಕೃಷಿ ಕೂಲಿ ಕಾರ್ಮಿಕರೊಂದಿಗೆ ಮಹಿಳಾ ಕಾಂಗ್ರೆಸ್ ಸಾರಥಿಗಳಿಂದ ಕೃಷಿಯ ಖುಷಿ ಸ್ವಾದ

ಮೂಡುಬಿದಿರೆ: ಬನ್ನಡ್ಕದಲ್ಲಿರುವ ಸೋನ್ಸ್ ಫಾರ್ಮ್ ಗೆ ರಾಜ್ಯ, ಜಿಲ್ಲಾ ಹಾಗೂ ವಿವಿಧ ಮಹಿಳಾ ಕಾಂಗ್ರೆಸ್ ಘಟಕಗಳ ಸದಸ್ಯರು ಗುರುವಾರ ಭೇಟಿ ನೀಡಿ ಫಾರ್ಮ್ ನ ಮಹಿಳಾ ಕಾರ್ಮಿಕರೊಂದಿಗೆ ಬೆರೆತು ಕೆಲಸ ಮಾಡಿದರು.

ಈ ಸಂದರ್ಭ ಬಿದಿರು ವನದಲ್ಲಿ ಭೋಜನ ಸ್ವೀಕರಿಸಿ, ಕಾರ್ಮಿಕರನ್ನು ಅಭಿನಂದಿಸಲಾಯಿತು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಹುಣಸೂರು ಜಿ.ಪಂ. ಸದಸ್ಯೆ ಡಾ.ಪುಷ್ಪಾ ಅಮರನಾಥ್ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಕೃಷಿ ಸುಧಾರಣೆ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಮುಷ್ಕರ 48 ದಿನ ದಾಟಿದೆ. 55 ಮಂದಿ ಪ್ರಾಣಾರ್ಪಣೆ ಮಾಡಿಯಾಗಿದೆ. ಇನ್ನಾದರೂ ಸರ್ಕಾರ ಈ ಕಾಯ್ದೆಗಳ ಪರಿಷ್ಕರಣೆ ನಡೆಸಲೇ ಬೇಕಾಗಿದೆ ಎಂದು ಆಗ್ರಹಿಸಿದರು.

ಕೃಷಿಕರು, ವಿಶೇಷವಾಗಿ ಮಹಿಳಾ ಕಾರ್ಮಿಕರಲ್ಲಿ ಆತ್ಮ ಶಕ್ತಿ ತುಂಬಲು ರಾಜ್ಯ ಮಹಿಳಾ ಕಾಂಗ್ರೆಸ್ ನಾನಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಶ್ರಮದಾನದ ಮೂಲಕ ಈ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈಗಾಗಲೇ ಮೈಸೂರು, ಹುಬ್ಬಳ್ಳಿ, ಉಡುಪಿಯ ಹೆಗ್ಗುಂಜೆಗೆ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಹನ ನಡೆಸಲಾಗಿದೆ. ಇದರ ಮುಂದಿನ ಹಂತದಲ್ಲಿ ಸ್ಥಳೀಯ ಘಟಕಗಳು ಈ ಕಾರ್ಯ ಮುಂದುವರಿಸಲಿವೆ ಎಂದು ಡಾ.ಪುಷ್ಪಾ ಅಮರನಾಥ್ ಹೇಳಿದರು.

ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಡಾ. ಎಲ್.ಸಿ. ಸೋನ್ಸ್ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮೂಡುಬಿದಿರೆ ಬ್ಲಾಕ್ ಅಧ್ಯಕ್ಷೆ ಸುಪ್ರಿಯಾ ಡಿ. ಶೆಟ್ಟಿ, ಮಂಗಳೂರು ನಗರ ಬ್ಲಾಕ್ ಅಧ್ಯಕ್ಷೆ ಶಾಂತಲಾ ಗಟ್ಟಿ, ಸುರತ್ಕಲ್ ಬ್ಲಾಕ್ ಅಧ್ಯಕ್ಷೆ ಶಶಿಕಲಾ ಅವರು ಸೋನ್ಸ್ ಫಾರ್ಮ್ ನ ಕಾರ್ಮಿಕರನ್ನು ಹಸಿರು ವಸ್ತ್ರ ನೀಡಿ ಪುರಸ್ಕರಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಗಳಾದ ಅಪ್ಪಿ, ಸುರೇಖಾ ಚಂದ್ರಹಾಸ್, ವಿವಿಧ ಘಟಕಗಳ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಲ್ಕಿ-ಮೂಡುಬಿದಿರೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಬೆಳುವಾಯಿ ಗ್ರಾಪಂ ಸದಸ್ಯ ರಾಘು ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

07/01/2021 10:29 pm

Cinque Terre

7.31 K

Cinque Terre

1

ಸಂಬಂಧಿತ ಸುದ್ದಿ