ಪುತ್ತೂರು: ಇತ್ತೀಚೆಗೆ ನಡೆದ ಪುಣಚ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಜಯ ಗಳಿಸಿದ ಅಭ್ಯರ್ಥಿಗಳಿಗೆ ಅಭಿನಂದನೆ ಸಮಾರಂಭ ಪುತ್ತೂರಿನಲ್ಲಿ ನಡೆಯಿತು.
ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ ಮಾತನಾಡಿ, ಗ್ರಾಪಂ ಸದಸ್ಯರು ಪುಣಚ ಗ್ರಾಪಂ ಅನ್ನು ಮಾದರಿ ಗ್ರಾಪಂ ಆಗಿ ರೂಪಿಸಲು ಶ್ರಮಿಸಬೇಕು ಎಂದು ಕಿವಿಮಾತು ಹೇಳಿ, ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.
ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಜಿಪಂ ಸದಸ್ಯೆ ಜಯಶ್ರೀ ಕೋಡಂದೂರು, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ತಾಪಂ ಸದಸ್ಯೆ ಕವಿತಾ, ಪಂ. ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
11/01/2021 07:19 pm