ಮುಲ್ಕಿ: ಹಳೆಯಂಗಡಿಯ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ), ಹಳೆಯಂಗಡಿ ವತಿಯಿಂದ ವಿವೇಕಾನಂದ ಜಯಂತಿ ಅಂಗವಾಗಿ ಯುವ ದಿನ ಸಪ್ತಾಹ ಆಚರಣೆ ಪ್ರಯುಕ್ತ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರು ಹಾಗೂ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಗೌರವಾಧ್ಯಕ್ಷ ಉಮಾನಾಥ ಕೋಟ್ಯಾನ್ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಇಂದಿನ ಯುವ ಜನಾಂಗ ಮೈಗೂಡಿಸಿಕೊಂಡು ಜಗತ್ತಿಗೆ ಮಾದರಿಯಾಗಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್ ಕಾಮೇರೊಟ್ಟು, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷರಾದ ಎಸ್.ಎಸ್.ಸತೀಶ್ ಭಟ್, ಪ್ರಣವ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಿ.ಆರ್.ಪ್ರಸಾದ್, ಯುವಕ ಮಂಡಲದ ಅಧ್ಯಕ್ಷರಾದ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕರ ಆರ್ ಅಮೀನ್, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ಟಾ, ಸಲಹಾ ಸಮಿತಿಯ ಅಧ್ಯಕ್ಷರಾದ ಸದಾಶಿವ ಅಂಚನ್, ಮಹಿಳಾ ಮಂಡಲದ ಅಧ್ಯಕ್ಷರಾದ ರೇಷ್ಮಾ ಅಶ್ರಫ್, ಯುವತಿ ಮಂಡಲದ ಅಧ್ಯಕ್ಷರಾದ ದಿವ್ಯಶ್ರೀ ರಮೇಶ್ ಕೋಟ್ಯಾನ್, ಜಂಟಿ ಸಂಸ್ಥೆಯ ಪದಾಧಿಕಾರಿಗಳು, ಉಪಸ್ಥಿತರಿದ್ದರು.
Kshetra Samachara
12/01/2021 03:21 pm