ಸುಳ್ಯ: ರಾಜ್ಯ ಸಂಪುಟ ದರ್ಜೆಯ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸ್ವಕ್ಷೇತ್ರ ಸುಳ್ಯಕ್ಕೆ ಆಗಮಿಸಿದ ಸಚಿವ ಎಸ್.ಅಂಗಾರ ಅವರಿಗೆ ಅದ್ಧೂರಿಯ ಸ್ವಾಗತ ನೀಡಲಾಯಿತು.
ಸುಳ್ಯದ ಜ್ಯೋತಿ ವೃತ್ತದಲ್ಲಿ ನೆರೆದಿದ್ದ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಆತ್ಮೀಯ, ಅದ್ಧೂರಿ ಸ್ವಾಗತ ನೀಡಿದರು. ಈ ಸಂದರ್ಭ ತೆರೆದ ವಾಹನದಲ್ಲಿ ರೋಡ್ ಶೋ ನಡೆದು, ಕಾರ್ಯಕರ್ತರ ಜಯಘೋಷ ಮುಗಿಲು ಮುಟ್ಟಿತ್ತು. ಎಸ್.ಅಂಗಾರ ಅವರು ಸುಳ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ನಾಳೆ ಸಚಿವರು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನದ ನಂತರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ.
Kshetra Samachara
15/01/2021 09:53 pm