ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಂದೇಲ್: "ಸರಕಾರ ಶಿಕ್ಷಣ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ"

ಮಂಗಳೂರು: ಸರಕಾರ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ, ಉಪನ್ಯಾಸಕರ ಪಾತ್ರ ಪ್ರಮುಖ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬೊಂದೇಲ್ ನಲ್ಲಿರುವ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ನೂತನ ವಿದ್ಯಾರ್ಥಿನಿ ನಿಲಯ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ 1 ಕೋಟಿ ರೂ. ಅನುದಾನದಲ್ಲಿ ವಿದ್ಯಾರ್ಥಿನಿ ನಿಲಯದ ನೂತನ ಕಟ್ಟಡ ನಿರ್ಮಾಣವಾಗಿದೆ. ಸರಕಾರ ಉಚಿತ ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ರೂ. ಪ್ರತಿವರ್ಷ ಮೀಸಲಿಡುತ್ತದೆ. ಸರಕಾರದ ಅಧೀನದ ಶಾಲೆ,ಕಾಲೇಜು, ಪಾಲಿಟೆಕ್ನಿಕ್ ಗಳಲ್ಲಿ ಖಾಸಗಿ ರಂಗದ ಶಿಕ್ಷಣಕ್ಕೆ ಸ್ಪರ್ಧೆ ನೀಡುವಷ್ಟರ ಮಟ್ಟಿಗೆ ನಮ್ಮ ಉಪನ್ಯಾಸಕರಲ್ಲಿ ಕೌಶಲ್ಯ ಸಂಪನ್ಮೂಲವಿದೆ ಎಂದರು.

ಈ ಸಂದರ್ಭ ರಾಜ್ಯ ಸರಕಾರದ 1 ಕೋಟಿ 25 ಲಕ್ಷ ರೂ. ಅನುದಾನದಲ್ಲಿ ವಿದ್ಯಾರ್ಥಿನಿ ನಿಲಯದ ನವೀಕರಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. ಸ್ಥಳೀಯ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್, ಕಾರ್ಪೊರೇಟರ್ ಲೋಹಿತ್ ಅಮೀನ್, ಮುಗ್ರೋಡಿ ನಿರ್ಮಾಣ ಸಂಸ್ಥೆಯ ಸಚಿನ್ ಶೆಟ್ಟಿ, ಪ್ರಾಜೆಕ್ಟ್ ಇಂಜಿನಿಯರ್, ಲೋಕೋಪಯೋಗಿ ಇಂಜಿನಿಯರ್, ಪ್ರಾಂಶುಪಾಲರು, ಶಿಕ್ಷಕರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

18/01/2021 07:37 am

Cinque Terre

2.15 K

Cinque Terre

0

ಸಂಬಂಧಿತ ಸುದ್ದಿ