ಮಂಗಳೂರು: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ ಮಂಗಳೂರಿನ ಬಳ್ಳಾಲ್ ಭಾಗ್ ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್ ಅವರಿಗೆ ಸಂಘದ ಪರವಾಗಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಮಾಜದ ಸಾಧಕರನ್ನು ಶಾಸಕರು ಸನ್ಮಾನಿಸಿದರು.
ಮನಪಾ ಸದಸ್ಯರಾದ ಮನೋಜ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು ಸಹಿತ ಸೇವಾ ಸಂಘದ ಅಧ್ಯಕ್ಷ ಶಿವಾನಂದ ಬಳ್ಳಾಲ್ ಭಾಗ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಅತಿಥಿ ಗಣ್ಯರು ಉಪಸ್ಥಿತರಿದ್ದರು.
Kshetra Samachara
24/01/2021 02:31 pm