ಮಂಗಳೂರು: ದೇಶದ ಅಸ್ಮಿತೆಯ ಪ್ರತೀಕವಾಗಿರುವ ಭವ್ಯ ಶ್ರೀ ರಾಮ ಮಂದಿರವನ್ನು ಪ್ರಭು ಶ್ರೀ ರಾಮಚಂದ್ರನ ಜನ್ಮಸ್ಥಾನವಾಗಿರುವ ಅಯೋಧ್ಯೆಯಲ್ಲಿ ಕಣ್ತುಂಬಿಕೊಳ್ಳಲು ದೇಶದ ಪ್ರಜೆ ಕಾತರದಿಂದ ಕಾಯುತ್ತಿದ್ದಂತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರ ಮಾರ್ಗದರ್ಶನದಲ್ಲಿ ಪರಿವಾರದ ಕಾರ್ಯಕರ್ತರು ನಾನಾ ಕಡೆ ನಿಧಿ ಸಮರ್ಪಣೆ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ.
ಈ ಅಭಿಯಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಶಾಸಕ ಡಾ.ವೈ. ಭರತ್ ಶೆಟ್ಟಿಯವರು ಆದಿತ್ಯವಾರ ಕೂಡ ಪಚ್ಚನಾಡಿ,ಕಾವೂರು ಭಾಗದ ವಿವಿಧ ಕಡೆ ಮನೆ- ಮನೆಗಳಿಗೆ ತೆರಳಿ ನಿಧಿ ಸಮರ್ಪಣೆ ಅಭಿಯಾನದಲ್ಲಿ ತೊಡಗಿಸಿಕೊಂಡರು.
ಶಾಸಕರ ಜೊತೆಗೆ ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಸ್ಥಳೀಯ ಕಾರ್ಪೊರೇಟರ್ ಗಳಾದ ಸಂಗೀತಾ ಆರ್. ನಾಯಕ್, ಸುಮಂಗಲಾ ರಾವ್, ಪ್ರಮುಖರಾದ ಪ್ರಶಾಂತ್ ಪೈ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು ಉಪಸ್ಥಿತರಿದ್ದರು.
Kshetra Samachara
25/01/2021 01:15 pm