ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: "ರಾಷ್ಟ್ರ ರಕ್ಷಣೆಗೆ ಸೌಹಾರ್ದದ ಸಂಕಲ್ಪ" ಎಸ್ಕೆಎಸ್ಸೆಸ್ಸೆಫ್ ಮಾನವ ಸರಪಳಿ, ಪ್ರತಿಜ್ಞೆ

ಬಂಟ್ವಾಳ: ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ "ರಾಷ್ಟ್ರ ರಕ್ಷಣೆಗೆ ಸೌಹಾರ್ದದ ಸಂಕಲ್ಪ" ಘೋಷ ವಾಕ್ಯದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ಮಂಗಳವಾರ ಮಾನವ ಸರಪಳಿಯು ಬಿ.ಸಿ.ರೋಡಿನ ಕೈಕಂಬ ಪೂಂಜ ಮೈದಾನದಲ್ಲಿ ಜರುಗಿತು.

ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಮನೆಯಿಂದ ಮೈದಾನದ ತನಕ ಸೌಹಾರ್ದ ಕಾಲ್ನಡಿಗೆ ಜಾಥಾ ನಡೆಯಿತು. ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯದ್ ಅಮೀರ್ ತಂಙಲ್ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಿದರು.

ಸಮಸ್ತ ಮುಶಾವರ ಸದಸ್ಯ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್, ಸಯ್ಯದ್ ಝೈನುಲ್ ಆಭಿದೀನ್ ತಂಙಳ್ ಬೆಳ್ತಂಗಡಿ, ಉಳ್ಳಾಲ ಶಾಸಕ ಯು.ಟಿ.ಖಾದರ್, ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು.

ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿ ಉಪಾಧ್ಯಕ್ಷ ಸಯ್ಯದ್ ಫಕ್ರುದ್ದೀನ್ ತಂಙಳ್ ತಾಣೂರು, ಯುವ ವಾಗ್ಮಿ ಇಕ್ಬಾಲ್ ಬಾಳಿಲ ಮುಖ್ಯ ಪ್ರಭಾಷಣ ನಡೆಸಿದರು. ಸಾವಿರಾರು ಮಂದಿ ಮಾನವ ಸರಪಳಿ ನಡೆಸಿ ಸೌಹಾರ್ದದ ಪ್ರತಿಜ್ಞೆ ಕೈಗೊಂಡರು.

ಅಲ್ಪಸಂಖ್ಯಾತರ ಅನುದಾನ ಕಡಿತವನ್ನು ವಿರೋಧಿಸಿ ಮತ್ತು ರೈತರ ಹೋರಾಟಕ್ಕೆ ನ್ಯಾಯ ಒದಗಿಸುವಂತೆ ನಿರ್ಣಯ ಮಂಡಿಸಲಾಯಿತು.

Edited By : Nagaraj Tulugeri
Kshetra Samachara

Kshetra Samachara

26/01/2021 08:33 pm

Cinque Terre

3.6 K

Cinque Terre

1

ಸಂಬಂಧಿತ ಸುದ್ದಿ