ಮೂಡುಬಿದಿರೆ: ವಿದ್ಯಾಗಿರಿಯಿಂದ ಸ್ವರಾಜ್ಯ ಮೈದಾನದ ವರೆಗೆ "ಕೆ.ಅಮರನಾಥ ಶೆಟ್ಟಿ ರಸ್ತೆ" ಎಂದು ನಾಮಕರಣ ಮಾಡಲಾಗಿದ್ದು, ಬುಧವಾರ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಜಯಶ್ರೀ ಅಮರನಾಥ ಶೆಟ್ಟಿ, ಎ.ಜೆ. ಸಂಸ್ಥೆಯ ಪ್ರಶಾಂತ್ ಶೆಟ್ಟಿ, ಜಯವೀರ್ ರೈ, ಕರುಣಾಕರ ಶೆಟ್ಟಿ, ರಾಕೇಶ್ ಶೆಟ್ಟಿ, ಜಿಪಂ ಸದಸ್ಯ ಕೆ.ಪಿ.ಸುಚರಿತ ಶೆಟ್ಟಿ, ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ., ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ, ಮುಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್, ಮುಖಂಡರಾದ ಕೆ.ಆರ್.ಪಂಡಿತ್, ಎಂ.ಎಸ್.ಕೋಟ್ಯಾನ್, ಶಾಂತಿ ಪ್ರಸಾದ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಸುಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
27/01/2021 07:47 pm