ಮಂಗಳೂರು: 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಇಂದು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿಯವರು ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರ ಪುಟ್ಟ ಮಗಳಿಗೆ ಪೋಲಿಯೊ ಹನಿ ಹಾಕುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅನೇಕ ಕಂದಮ್ಮಗಳಿಗೆ ಶಾಸಕ ಡಾ.ಭರತ್ ಶೆಟ್ಟಿಯವರು ಪೋಲಿಯೊ ಹನಿ ಹಾಕುವ ಮೂಲಕ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Kshetra Samachara
31/01/2021 04:33 pm