ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘದ ಕುಲಾಲ ಸಮ್ಮಿಲನ, ಪದಗ್ರಹಣ, ಸನ್ಮಾನ, ಅಭಿನಂದನೆ ಹಾಗೂ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಭಾಗಿಯಾದರು.
ಮಂಗಳೂರಿನ ಶ್ರೀ ವೀರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ, ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಸಹಿತ ಅತಿಥಿ ಗಣ್ಯರು, ಪದಾಧಿಕಾರಿಗಳು, ನಾಗರಿಕರು ಉಪಸ್ಥಿತರಿದ್ದರು.
Kshetra Samachara
31/01/2021 06:38 pm