ಮುಲ್ಕಿ: ಭಾರತೀಯ ಜನತಾ ಪಾರ್ಟಿ ಮುಲ್ಕಿ- ಮೂಡುಬಿದಿರೆ ಮಂಡಲ ವತಿಯಿಂದ ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ, ಹಾಗೂ ಗೆದ್ದು ಆಯ್ಕೆಯಾದ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಭಾನುವಾರ ಕಿನ್ನಿಗೋಳಿ ರಾಜಾಂಗಣ ಸಭಾಭವನದಲ್ಲಿ "ಅಭಿನಂದನಾ ಸಮಾರಂಭ ಹಾಗೂ ಜನಸೇವಕ ಸಮಾವೇಶ" ನಡೆಯಿತು.
ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪಕ್ಷ ಹಾಗೂ ಸಿದ್ಧಾಂತ ಮೆಚ್ಚಿ ಮತದಾರರು ಚುನಾಯಿಸಿ ಕಳಿಸಿದ್ದಾರೆ. ಜನಸೇವೆಯೇ ಜನಾರ್ದನ ಸೇವೆ ಎಂಬಂತೆ ಮತದಾರರ ಆಶೋತ್ತರ ಈಡೇರಿಸುವುದರ ಜೊತೆಗೆ ಮುಂಬರುವ ಜಿಪಂ, ತಾಪಂ ಚುನಾವಣೆಗಳಿಗೆ ಸಿದ್ಧರಾಗಲು ತಿಳಿಸಿದರು.
ಶಾಸಕ ಉಮಾನಾಥ್ ಕೋಟ್ಯಾನ್ ಮಾತನಾಡಿ, ಅಭಿವೃದ್ಧಿಯೇ ಬಿಜೆಪಿಯ ಮೂಲ ಮಂತ್ರವಾಗಿದ್ದು, ಜನ ಬಿಜೆಪಿ ಪಕ್ಷದ ಮೇಲೆ ವಿಶ್ವಾಸವಿಟ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಲು ಕಾರಣೀಭೂತರಾಗಿದ್ದಾರೆ. ಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಲಾಗುವುದು ಎಂದರು. ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ., ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಪ್ರಮುಖರಾದ ಕಸ್ತೂರಿ ಪಂಜ, ಈಶ್ವರ್ ಕಟೀಲ್, ಸುಕೇಶ್ ಶೆಟ್ಟಿ, ಕೆ.ಆರ್. ಪಂಡಿತ್ , ರಾಜೇಶ್ ಕಾವೇರಿ, ಸುಧೀರ್ ಶೆಟ್ಟಿ , ಪೂಜಾ ಪೈ, ಗಣೇಶ್ ಹೊಸಬೆಟ್ಟು ಉಪಸ್ಥಿತರಿದ್ದರು.
Kshetra Samachara
31/01/2021 06:49 pm