ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ವಿರುದ್ಧ ಮಿಥುನ್ ರೈ ಕಿಡಿ

ಮುಲ್ಕಿ: ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ ಅಧಿಕಾರಿ ಬಿಲ್ಲವ ಸಮಾಜದ ಬಗ್ಗೆ ಹಾಗೂ ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ-ಚೆನ್ನಯ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತೀವ್ರವಾಗಿ ಖಂಡಿಸಿದ್ದಾರೆ.

ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಗದೀಶ ಅಧಿಕಾರಿ ಯವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ ಎಂಬವರ್ತಮಾನ ಬಂದಿದ್ದು ಅವರು ಗೆಜ್ಜೆಗಿರಿ ಗೆ ಹೋಗಿ ಕ್ಷಮಾಪಣೆ ಕೇಳಬೇಕಾಗಿದೆ ಎಂದರು.

ಜಗದೀಶ ಅಧಿಕಾರಿ ಯವರ ವರ್ತನೆ ಖಂಡಿಸ ಬೇಕಾದ ಬಿಜೆಪಿಯ ಘಟಾನುಘಟಿ ನಾಯಕರು ಮೌನವಾಗಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಮಿಥುನ್ ರೈ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ರವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಂದು ಉತ್ತರಪ್ರದೇಶದ ಹತ್ರಾಸ ದಲಿತ ಬಾಲಕಿಯ ಅತ್ಯಾಚಾರದ ಬಗ್ಗೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ತಾನು ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ನಿಂದಿಸಿ ಅವರ ಜನಾಂಗಕ್ಕೆ ಅವಹೇಳನಕಾರಿಯಾಗಿ ಮಾತನಾಡಿದ್ದೇನೆ ಎಂದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ತಮ್ಮದೇ ಪಕ್ಷದ ಜಗದೀಶ್ ಅಧಿಕಾರಿ ಯವರ ವರ್ತನೆ ಬಗ್ಗೆ ಯಾಕೆ ಮೌನವಾಗಿದ್ದಾರೆ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಯವರು ಕೇವಲ ಜಾತಿಸಂಘರ್ಷ ನಡೆಸುತ್ತಿದ್ದು ಚುನಾವಣೆ ಬರುವಾಗ ಸಮುದಾಯಗಳನ್ನು ಓಲೈಸಿಕೊಂಡು ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣಹಾಕುವ ಕೆಲಸ ಮಾಡುತ್ತಿದ್ದಾರೆ. ಜಾತಿ-ಜಾತಿಗಳ ನಡುವೆ ಸಂಘರ್ಷ ನಡೆಸುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಬಿಜೆಪಿಯವರ ಮುಖವಾಡ ಬಯಲಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬರ್ನಾಡ್, ಮುಲ್ಕಿ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಶಾಹುಲ್ ಹಮೀದ್, ಮಂಜುನಾಥ ಕಂಬಾರ ,ಹಕ್ಕಿಂ ಕಾರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

06/02/2021 10:13 pm

Cinque Terre

3.06 K

Cinque Terre

0

ಸಂಬಂಧಿತ ಸುದ್ದಿ