ಮಂಗಳೂರು: ಗೋಹತ್ಯೆ ನಿಷೇಧ ವಿಧೇಯಕ ರಾಜ್ಯ ವಿಧಾನ ಪರಿಷತ್‌ನಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಬಿಜೆಪಿ ಸರ್ಕಾರವು ಗೋ ಸಂರಕ್ಷಣೆಗೆ ದಿಟ್ಟ ಕ್ರಮ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಗೋ ಹತ್ಯೆ ನಿಷೇಧ ವಿಧೇಯಕ ಜಾರಿಗೊಳಿಸುವ ಮೂಲಕ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಈಡೇರಿಸಿದೆ. ಆದರೆ ಸದನದಲ್ಲಿ ಗೋಹತ್ಯೆ ನಿಷೇಧ ವಿಧೇಯಕವನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್ ತನ್ನ ನಿಜ ಬಣ್ಣವನ್ನು ಬಯಲು ಮಾಡಿದೆ. ಗೋಹತ್ಯೆಗೆ ಪ್ರಚೋದನೆ ನೀಡುವ ಕಾಂಗ್ರೆಸ್ ಪಕ್ಷವನ್ನು ಜನತೆ ಕ್ಷಮಿಸುವುದಿಲ್ಲ ಎಂದರು.
Kshetra Samachara
08/02/2021 10:42 pm