ಮಂಗಳೂರು: ಕೊಣಾಜೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಇದ್ದರೂ ಮೀಸಲಾತಿಯ ಹಿನ್ನೆಲೆಯಿಂದಾಗಿ ಕಾಂಗ್ರೆಸ್ ಬೆಂಬಲಿತರ ಪಾಲಾಗಿದೆ.ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಚಂಚಲಾಕ್ಷಿ ಅವಿರೋಧವಾಗಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಪೈಪೋಟಿಯಲ್ಲಿ ಬಿಜೆಪಿ ಬೆಂಬಲಿತ ರಾಮಕೃಷ್ಣ ಪಟ್ಟೋರಿ ಮಂಗಳವಾರ ಆಯ್ಕೆಯಾದರು.
ಕೊಣಾಜೆ ಗ್ರಾಪಂಗೆ ಈ ಬಾರಿ 29 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 15 ಬಿಜೆಪಿ ಬೆಂಬಲಿತರು, 11 ಕಾಂಗ್ರೆಸ್ ಬೆಂಬಲಿತರು ಹಾಗೂ 3 ಎಸ್ ಡಿಪಿಐ ಬೆಂಬಲಿತರು ಸ್ಥಾನ ಪಡೆದುಕೊಂಡಿದ್ದರು.
Kshetra Samachara
10/02/2021 11:06 am