ಹಳೆಯಂಗಡಿ ಸಮೀಪದ ಚೇಳೈರು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ಜರುಗಿತು.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಯಶೋದಾ ಬಿ. ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಲತಾ ನಾಮಪತ್ರ ಸಲ್ಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬಾಲಕೃಷ್ಣ ಶೆಟ್ಟಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚರಣ್ ಕುಮಾರ್ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಅಭ್ಯರ್ಥಿಯಾದ ಯಶೋದಾ ಬಿ. ಅವರಿಗೆ 9 ಮತ ಬೀಳುವ ಮೂಲಕ ಗೆಲುವು ಸಾಧಿಸಿದರು ಹಾಗೂ ಉಪಾಧ್ಯಕ್ಷ ಅಭ್ಯರ್ಥಿ ಯಾದ ಬಾಲಕೃಷ್ಣ ಶೆಟ್ಟಿ ಅವರಿಗೆ 8 ಮತ ಬಿದ್ದು ಗೆಲುವು ಸಾಧಿಸಿದರು.
ಚೇಳೈರು ಗ್ರಾಪಂ ನಲ್ಲಿ ಕಳೆದ ತಿಂಗಳು 13 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 9, ಕಾಂಗ್ರೆಸ್ ಬೆಂಬಲಿತ 4 ಅಭ್ಯರ್ಥಿಗಳು ಜಯ ಗಳಿಸಿದ್ದರು. ಚುನಾವಣಾ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸುನಿತಾ ಉಪಸ್ಥಿತರಿದ್ದರು.
Kshetra Samachara
10/02/2021 04:31 pm