ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಗುರುವಾರ ಚಾಲನೆ ನೀಡಿದರು.
ಮೇಯರ್ ದಿವಾಕರ ಪಾಂಡೇಶ್ವರ್, ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
11/02/2021 07:06 pm