ಮಂಜೇಶ್ವರ: ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಸೆರೆವಾಸದ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.
ಈ ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದುರ್ಗ ನ್ಯಾಯಾಲಯ ಜಾಮೀನು ಮಂಜೂರು ಮಾಡಿರಲಿಲ್ಲ. ಆದರೆ, ಬುಧವಾರ ಬಾಕಿ ಇದ್ದ ಆರೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲ್‌ನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
Kshetra Samachara
11/02/2021 10:39 pm