ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜೀವ್ ಗಾಂಧಿ ನಗರ ವಸತಿ ಯೋಜನೆಯ ಮನೆ ಹಂಚಿಕೆಗಾಗಿ ಸಭೆ

ಮಂಗಳೂರು: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ದ ಅಫೋರ್ಡೆಬಲ್ ಹೌಸಿಂಗ್ ಇನ್ ಪಾರ್ಟ್ ನರ್ಶಿಫ್ ಘಟಕದಡಿ ರಾಜ್ಯದ ವಿವಿಧ ನಗರಗಳಲ್ಲಿ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಒದಗಿಸಲು ನಗರ ಸ್ಥಳೀಯ ಸಂಸ್ಥೆಯವರು ಬಹುಮಹಡಿ ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲು ಉದ್ದೇಶಿಸಿದ್ದಾರೆ.

ಈ ಕುರಿತು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ತಮ್ಮ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕಾರ್ಪೋರೇಟರ್ ಗಳ ಸಭೆಯನ್ನು ಪಾಲಿಕೆ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಸಿದರು. ಈ ಯೋಜನೆಯ ಕುರಿತು ಶಾಸಕರು ವಿಸ್ತ್ರತವಾದ ಮಾಹಿತಿಯನ್ನು ನೀಡಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ತಿಳಿಸಿದರು.

ಸಭೆಯಲ್ಲಿ, ಉಪಮೇಯರ್ ವೇದಾವತಿ, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ರಾಜೀವ್ ಗಾಂಧಿ ನಗರ ವಸತಿ ನಿಗಮ ನಿಯಮಿತ ಅಧಿಕಾರಿ ಚಿತ್ತರಂಜನ್ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

12/02/2021 10:01 pm

Cinque Terre

2.75 K

Cinque Terre

0

ಸಂಬಂಧಿತ ಸುದ್ದಿ