ಮುಲ್ಕಿ: ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಆಂತರಿಕ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಸರಕಾರದ ಮೀಸಲಾತಿ ನಿಯಮದನ್ವಯ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಸುಗುಣ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿದ್ದು ರಾಜೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ತಿಂಗಳ ಹಿಂದೆ ನಡೆದ ಐಕಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 14 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರ ಪಾಲಾಗಿದ್ದು ಕ್ಲೀನ್ ಸ್ವೀಪ್ ಸಾಧಿಸಿತ್ತು. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಬಳಿಕ ಬಿಜೆಪಿ ಬೆಂಬಲಿತರು ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಐಕಳ ಗ್ರಾಪಂ ಮಾಜಿ ಅಧ್ಯಕ್ಷ ದಿವಾಕರ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರು ತಾಲ್ಲೂಕು ಪಂಚಾಯತ್ ಸದಸ್ಯರು ಹಾಗೂ ಬಿಜೆಪಿಯ ನಾಯಕರು ಉಪಸ್ಥಿತರಿದ್ದರು. ಚುನಾವಣಾ ಅಧಿಕಾರಿಯಾಗಿ ದಕ್ಷಿಣ ಕನ್ನಡ ಜಿಪಂ ಮಂಗಳೂರು ಶಿಕ್ಷಣಾಧಿಕಾರಿ ಡಾ ಉಷಾ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಪಂಚಾಯ್ತಿ ಪಿಡಿಒ ನಾಗರತ್ನ, ಕಾರ್ಯದರ್ಶಿ ನಾರಾಯಣ ಮೂಲ್ಯ ಉಪಸ್ಥಿತರಿದ್ದರು.
Kshetra Samachara
12/02/2021 10:30 pm