ಮುಲ್ಕಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಥಮ ಸಭೆ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಅಶೋಕ್ ಪೂಜಾರ್ ಅಧ್ಯಕ್ಷತೆಯಲ್ಲಿ ಜರುಗಿತು. ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ್ ಕೋಟ್ಯಾನ್ ಮಾತನಾಡಿ, ಯುವಕರ ಮೂಲಕ ಕಾಂಗ್ರೆಸ್ ಪಕ್ಷವನ್ನುಮತ್ತಷ್ಟು ಬಲಿಷ್ಠಗೊಳಿಸಲು ಸಿದ್ಧರಾಗೋಣ ಎಂದರು.
ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್ ಮಾತನಾಡಿ, ತಾಪಂ ಚುನಾವಣೆ ಸಮೀಪಿಸುತ್ತಿದ್ದು ಈಗಲೇ ಸಿದ್ಧರಾಗಬೇಕು ಎಂದರು. ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಕೀಂ ಕಾರ್ನಾಡ್, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಹಮದ್ ಹರ್ಷದ್ , ಮುಲ್ಕಿ ಮೂಡಬಿದ್ರೆ ಇಂಟೆಕ್ ಕ್ಷೇತ್ರಾಧ್ಯಕ್ಷ ಮೋಹನ್ ಕೋಟ್ಯಾನ್, ಯುವ ಉದ್ಯಮಿ ಗೌತಮ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
14/02/2021 02:30 pm