ಬಂಟ್ವಾಳ: ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಮೋಹಿನಿ ಕಲಾಯಿ ಹಾಗೂ ಉಪಾಧ್ಯಕ್ಷರಾಗಿ ಸುನಿಲ್ ಕುಮಾರ್ ಕಾಯರ್ಮಾರ್ ಆಯ್ಕೆಯಾಗಿದ್ದು, ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ. ಸೋಮವಾರ ಗ್ರಾ.ಪಂ.ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಗ್ರಾ.ಪಂ.ನ ಒಟ್ಟು 20 ಸ್ಥಾನಗಳ ಪೈಕಿ 14 ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಹೀಗಾಗಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.
Kshetra Samachara
16/02/2021 03:39 pm