ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೇಳೈರು: "ಗ್ರಾಪಂ ಸದಸ್ಯರು ಪಕ್ಷಬೇಧ ಮರೆತು ಕಾರ್ಯ ನಿರ್ವಹಿಸಿದರೆ ಊರಿನ ಅಭಿವೃದ್ಧಿ ಸಾಧ್ಯ"

ಮುಲ್ಕಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ, ಪಂಚಾಯತ್ ಗೆ ಜನಸಂಖ್ಯೆಯ ಅಧಾರದಲ್ಲಿ ಬಹಳಷ್ಟು ಅನುದಾನ ನೀಡುತ್ತಿದ್ದು, ಇದರ ಸದುಪಯೋಗ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಅವರು ಚೇಳೈರು ಗ್ರಾಪಂ ಅನುದಾನ ಮತ್ತು ದಾನಿಗಳ ಸಹಕಾರದಿಂದ ನಿರ್ಮಾಣ ಗೊಂಡ ಗ್ರಾಪಂನ ವಿಸ್ತರಣಾ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಗ್ರಾಪಂ ಸದಸ್ಯರು ಪಕ್ಷಬೇಧ ಮರೆತು ಕೆಲಸ ಮಾಡಿದರೆ ಆ ಗ್ರಾಪಂ ಮಾದರಿ ಪಂಚಾಯತ್ ಆಗುವಲ್ಲಿ ಸಂದೇಹವಿಲ್ಲ. ಹಾಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಎಂದರು.

ಅಧ್ಯಕ್ಷತೆಯನ್ನು ಚೇಳೈರು ಗ್ರಾಪಂ ಅಧ್ಯಕ್ಷೆ ಯಶೋದಾ ವಹಿಸಿದ್ದರು. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಪಂ ಸದಸ್ಯೆ ವಜ್ರಾಕ್ಷಿ ಪಿ. ಶೆಟ್ಟಿ, ಮುಂಬಯಿ ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯ, ಎಂಆರ್ ಪಿಎಲ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗಡೆ, ಜನರಲ್ ಮ್ಯಾನೇಜರ್ ಸುಬ್ರಾಯ ಭಟ್, ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್, ಜಿ. ಪಂ. ಇಂಜಿನಿಯರ್ ಪ್ರಶಾಂತ್ ಅಳ್ವ,ಚೇಳೈರು ಗ್ರಾಪಂ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ನಿತ್ಯಾನಂದ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಪಂ ಅಭಿವೃದ್ಧಿಗೆ ಸಹಕಾರ ನೀಡಿದ ಮುಂಬಯಿ ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯ ಅವರನ್ನು ಸನ್ಮಾನಿಸಲಾಯಿತು.

Edited By : Vijay Kumar
Kshetra Samachara

Kshetra Samachara

23/02/2021 10:13 am

Cinque Terre

3.01 K

Cinque Terre

0

ಸಂಬಂಧಿತ ಸುದ್ದಿ