ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ: ಬ್ಲೂ ಫ್ಲ್ಯಾಗ್ ಬೀಚ್, ಕಾಪು ಲೈಟ್ ಹೌಸ್‌ಗೆ ಸಚಿವ ಯೋಗೇಶ್ವರ್ ಭೇಟಿ; 12 ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ

ಕಾಪು: ತಾಲೂಕಿನ ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ಮತ್ತು ಕಾಪು ದ್ವೀಪಸ್ತಂಭ ಬಳಿ ಸುಮಾರು 12 ಕೋಟಿ ರೂ. ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಸಲುವಾಗಿ ಪಟ್ಟಿ ಕಳುಹಿಸಿಕೊಡುವಂತೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ಮತ್ತು ಕಾಪು ಬೀಚ್ ಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ವಾಹನದಟ್ಟಣೆ ಸುಸ್ಥಿತಿಗೆ ತರಲು ಎರಡು ಸೇತುವೆಗಳ ನಿರ್ಮಾಣ ಸಹಿತವಾಗಿ ರಸ್ತೆ ವಿಸ್ತರಣೆಗೆ 10 ಕೋಟಿ ರೂ. ಹಾಗೂ ಕಾಪು ಲೇಟ್ ಹೌಸ್ ಬೀಚ್‌ ಮೂಲ ಸೌಕರ್ಯ ಅಭಿವೃದ್ಧಿ ಸಹಿತ ಎರಡು ಬಂಡೆಗಳ ನಡುವೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ 2 ಕೋಟಿ ರೂ.ನ ಪ್ರಸ್ತಾವನೆ ಈಗಾಗಲೇ ಪ್ರವಾಸೋದ್ಯಮ ಇಲಾಖೆಯ ಬಳಿಯಿದೆ. ಅದಕ್ಕೆ ಶೀಘ್ರ ಇಲಾಖಾ ಅನುಮೋದನೆ ನೀಡಲಾಗುವುದೆಂದರು.

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಶಾಸಕ ಲಾಲಾಜಿ ಮೆಂಡನ್, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖಾ ಸಹಾಯಕ ನಿರ್ದೇಶಕ ಸೋಮಶೇಖರ್, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ನಾಯಕ್, ಕರಾವಳಿ ಪ್ರವಾಸೋದ್ಯಮ ಸಂಸ್ಥೆ(ಆ್ಯಕ್ಟ್) ಅಧ್ಯಕ್ಷ ಮನೋಹರ ಶೆಟ್ಟಿ ಕಾಪು ಮತ್ತು ಕಾರ್ಯದರ್ಶಿ ಗೌರವ್ ಶೇಣವ, ಬ್ಲೂಫ್ಲ್ಯಾಗ್ ಬೀಚ್ ಪ್ರಬಂಧಕ ವಿಜಯ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

27/02/2021 10:01 pm

Cinque Terre

3.34 K

Cinque Terre

0

ಸಂಬಂಧಿತ ಸುದ್ದಿ