ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಬಪ್ಪನಾಡು ಕ್ಷೇತ್ರ ಭೇಟಿ; ಡೋಲು ಬಾರಿಸಿ ಖುಷಿ ಪಟ್ಟ ಹಿರಿಯ ನೇತಾರ

ಮುಲ್ಕಿ: ಮಾಜಿ ಸಚಿವ, ಭಾರತ್ ಸ್ಕೌಟ್ಸ್- ಗೈಡ್ಸ್ ಕರ್ನಾಟಕದ ಮುಖ್ಯಸ್ಥ ಪಿ.ಜಿ.ಆರ್. ಸಿಂಧ್ಯಾ ಮುಲ್ಕಿಯ ಐತಿಹಾಸಿಕ ಹಿರಿಮೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ದೇವಳದಲ್ಲಿರುವ ಬಪ್ಪನಾಡು ಡೋಲಿನ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಡೋಲು ಬಾರಿಸಿ ಖುಷಿ ಪಟ್ಟರು. ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಕೀಯ ನಿವೃತ್ತಿ ಬಗ್ಗೆ ಯೋಚಿಸಿಲ್ಲ ಎಂದರು.

ಜೆಡಿಎಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒಮ್ಮೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡುತ್ತಾರೆ, ಈಗ ದೂರುತ್ತಿದ್ದಾರೆ ಎಂದು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ಇದೆಲ್ಲ ಹೈಕಮಾಂಡ್ ಗೆ ಬಿಟ್ಟ ವಿಚಾರ. ಈ ಬಗ್ಗೆ ಸೂಕ್ತ ವೇದಿಕೆಯಲ್ಲಿ ಉತ್ತರಿಸುತ್ತೇನೆ ಎಂದರು.

ರಾಜ್ಯದಲ್ಲಿ ಹಾಗೂ ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಯಾವ ಕ್ರಮ ಕೈಗೊಂಡಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಸಿದ್ಧತೆ ನಡೆಸಲಾಗಿದೆ. ಆದರೆ, ಜನರು ಆಡಳಿತ ಪಕ್ಷದ ಜೊತೆಗೇ ಇದ್ದಾರೆ. ಜನ ಬದಲಾವಣೆ ಬಯಸಿದರೆ ಎಲ್ಲವೂ ಸಾಧ್ಯ ಎಂದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ ಬೆಲೆಯೇರಿಕೆಯನ್ನು ವಿರೋಧಿಸುತ್ತಿದ್ದಾರೆ. ಮೋದಿ ಆಡಳಿತದ ಬಗ್ಗೆ ಹಾಗೂ ಅದಾನಿ, ಅಂಬಾನಿ ಅವರಿಗೆ ಮಣೆ ಹಾಕುತ್ತಿದ್ದಾರೆ ಅಲ್ಲವೆ? ಎಂಬ ಪ್ರಶ್ನೆಗೆ, ಎಲ್ಲದಕ್ಕೂ ಕಾಲ ಬಂದಾಗ ಉತ್ತರಿಸುತ್ತೇನೆ ಎಂದರು.

ಈ ಸಂದರ್ಭ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಬಪ್ಪನಾಡು ದೇವಳದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಜೆಡಿಎಸ್ ಮುಖಂಡರಾದ ಜೀವನ್ ಶೆಟ್ಟಿ ಕಾರ್ನಾಡ್, ನಿಸಾರ್ ಅಹಮದ್ ಅಂಗರಗುಡ್ಡೆ, ಸಂತೋಷ್ ದೇಶುಣಿಗಿ, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ರಮೇಶ್ ಕೊಕ್ಕರಕಲ್, ಉದಯ ಕುಮಾರ್ ಶೆಟ್ಟಿ, ರಂಗನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮುಲ್ಕಿ ವಲಯ ಸ್ಕೌಟ್ಸ್ - ಗೈಡ್ಸ್ ಸಂಸ್ಥೆ ಪದಾಧಿಕಾರಿಗಳು, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

Edited By : Manjunath H D
Kshetra Samachara

Kshetra Samachara

28/02/2021 02:17 pm

Cinque Terre

4.08 K

Cinque Terre

0

ಸಂಬಂಧಿತ ಸುದ್ದಿ