ಮುಲ್ಕಿ: ಹಳೆಯಂಗಡಿ ಸಮೀಪದ ಚೇಳೈರು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮದ ಒಣ ತ್ಯಾಜ್ಯ ವಿಲೇವಾರಿ ಮಾಡಲು ಒಣ ತ್ಯಾಜ್ಯ ಸಂಗ್ರಹ ವಾಹನವನ್ನು ಪಂಚಾಯಿತಿ ವತಿಯಿಂದ ವ್ಯವಸ್ಥೆ ಮಾಡಿದ್ದು, ಶಾಸಕರಾದ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು.
ಜಿಪಂ ಉಪಾಧ್ಯಕ್ಷರಾದ ಕಸ್ತೂರಿ ಪಂಜ, ತಾಪಂ ಸದಸ್ಯೆ ವಜ್ರಾಕ್ಷಿ ಪಿ. ಶೆಟ್ಟಿ, ಮುಂಬಯಿ ಉದ್ಯಮಿ ಕರುಣಾಕರ ಎಂ. ಶೆಟ್ಟಿ ಮಧ್ಯ, ಚೇಳೈರು ಗ್ರಾಪಂ ಅಧ್ಯಕ್ಷರಾದ ಯಶೋದಾ, ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ, ಜಯಾನಂದ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
01/03/2021 08:33 am