ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಕಟೀಲು ಕ್ಷೇತ್ರದ ಆರ್ಚಕ ಅನಂತ ಪದ್ಮನಾಭ ಅಸ್ರಣ್ಣ ಕಟೀಲು ಕ್ಷೇತ್ರದಲ್ಲಿ ಆಗಬೇಕಾದ ಅಭಿವೃದ್ಧಿಯ ಬಗ್ಗೆ ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭ ಜಿಪಂ ಮಾಜೀ ಉಪಾಧ್ಯಕ್ಷೆ ಕಸ್ತೂರಿ ಪಂಜ, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಕಟೀಲು ಕ್ಷೇತ್ರದ ಆರ್ಚಕ ಹರಿ ಆಸ್ರಣ್ಣ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕೇಶವ, ಅಭಿಲಾಶ್ ಶೆಟ್ಟಿ ಆದರ್ಶ ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/08/2021 03:17 pm