ಸುರತ್ಕಲ್:ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಆರಂಭಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡ ಕಾಳಪ್ಪ ಕುಕ್ಯಾನ್ ಕಛೇರಿ ಉದ್ಘಾಟಿಸಿದರು.
ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ ಡಾ. ಭರತ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಕೋಟ್ಯಂತರ ರೂಪಾಯಿ ಅನುದಾನವನ್ನು ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ.
ಜನರ ನಿರಂತರ ಸಂಪರ್ಕಕ್ಕಾಗಿ ಮಂಗಳೂರಿನಲ್ಲಿ ಕಚೇರಿ ಹೊಂದಿದ್ದರು. ಸುರತ್ಕಲ್, ಕಾವೂರು ಸುತ್ತಮುತ್ತಲಿನ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುರತ್ಕಲ್ ನಲ್ಲಿಯೂ ಸುಸಜ್ಜಿತ ಕಚೇರಿ ಆರಂಭಿಸಿದ್ದಾರೆ.
ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶಾಸಕರು ಹೆಚ್ಚು ಹೊತ್ತು ನೀಡಿದ್ದು ಮುಂದೆಯೂ ಇವರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಮುಂದುವರೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಬಾಲಕೃಷ್ಣ ಭಟ್, ಕಾಳಪ್ಪ ಗೌಡ ರವರನ್ನು ಡಾ. ಭರತ್ ಶೆಟ್ಟಿ ಗೌರವಿಸಿದರು.
ಮಂಗಳೂರು ಉತ್ತರ ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಉದ್ಯಮಿ ಸುಭಾಶ್ಚಂದ್ರ ಶೆಟ್ಟಿ, ಬಿಜೆಪಿ ಪಕ್ಷದ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು ಪದಾಧಿಕಾರಿಗಳು, ಬಿಜೆಪಿ ಪಕ್ಷದ ಕಾರ್ಯಕರ್ತರು ಈ ಸಂದರ್ಭ
ಉಪಸ್ಥಿತರಿದ್ದರು.
Kshetra Samachara
15/10/2021 12:51 pm